main logo

ಕೇರಳ ಸ್ಫೋಟ ಪ್ರಕರಣ ಬಿಗ್‌ ಅಪ್‌ಡೇಟ್‌: ಸ್ಫೋಟ ನಡೆಸಿದ ವ್ಯಕ್ತಿ ಸೆರೆ

ಕೇರಳ ಸ್ಫೋಟ ಪ್ರಕರಣ ಬಿಗ್‌ ಅಪ್‌ಡೇಟ್‌: ಸ್ಫೋಟ ನಡೆಸಿದ ವ್ಯಕ್ತಿ ಸೆರೆ

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ. ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಕನ್ವೆನ್​ಷನ್​ ಸೆಂಟರ್​ನಲ್ಲಿ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಆತಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ತಾನೇ ಈ ಅಪರಾಧವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ, ಕಣ್ಣೂರು ಪೊಲೀಸರು ವ್ಯಕ್ತಿಯೊಬ್ಬನ ಬ್ಯಾಗ್​ನಲ್ಲಿ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತ್​ ಮೂಲದ ಈತ ಮಂಗಳೂರಿನಿಂದ ಅರಿಕೋಡಿಗೆ ತೆರಳುತ್ತಿದ್ದ ಎನ್ನಲಾಗಿದೆ. ಪೊಲೀಸರು ಸುಮಾರು 15 ನಿಮಿಷಗಳ ಕಾಲ ಆತನನ್ನು ವಿಚಾರಗೊಳಪಡಿಸಿದ್ದರು, ಅನುಮಾನದ ಮೇಲೆ ವಶಕ್ಕೆ ತೆಗೆದುಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!