ಕೋಟ: ಮೊಬೈಲ್ ಪೋನ್‌ನಲ್ಲಿ ಮಾತ ನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ. ಈತ ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿ ದ್ದಾನೆ. ಪ್ರಮೋದ್ ಬಡಕುಟುಂಬ ದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಸೌಮ್ಯ ಸ್ವಭಾವದನಾಗಿದ್ದ ಈತ ವಾಲಿಬಾಲ್ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ. ಇಬ್ಬರು ಸಹೋದರನ್ನು ಅಗಲಿದ್ದಾನೆ. ಕುಟುಂಬದವರು ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ.

- 30 October 2023
0
Less than a minute
Related Articles
prev
next