Site icon newsroomkannada.com

ಕುಕ್ಕೆ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್

ಸುಬ್ರಹ್ಮಣ್ಯ: ದೇವಾಲಯಗಳ ಬಳಿ ಹಿಂದೂಗಳನ್ನು ಹೊರತುಪಡಿಸಿ ಬೇರೆಯವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎನ್ನುವ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮತ್ತೆ ಶುರುವಾಗಿದೆ. ಡಿ.18 ರಂದು ನಡೆಯಲಿರುವ ಚಂಪಾ ಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ‌ ಸಂಘಟನೆಗಳು ಒತ್ತಾಯಿಸಿವೆ. ಈ ಹಿನ್ನಲೆಯಲ್ಲಿ ದೇವಳದ ಕಾರ್ಯ ನಿರ್ವಹಣಾ ಅಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.
ಚಂಪಾ ಷಷ್ಠಿ ಸಂದರ್ಭದಲ್ಲಿ ಇಲ್ಲಿ ಜಾತ್ರೆ ನಡೆಯುತ್ತದೆ. ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ‌ ಅವಕಾಶ ನೀಡದಂತೆ ಸುಬ್ರಹ್ಮಣ್ಯದ ಕುಮಾರಧಾರ ಬಳಿ ಹಿಂದೂ ಸಂಘಟನೆಗಳು ಬ್ಯಾನರ್ ಹಾಕಿ ಮನವಿ ಸಲ್ಲಿಸಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಎನ್ನುವ ಹೆಸರಲ್ಲಿ ಈ ಬ್ಯಾನರ್ ಹಾಕಲಾಗಿದೆ. ಇದರಲ್ಲಿ ‘ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಇನ್ನು ಈ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದೆ.

Exit mobile version