ಉಡುಪಿ: ಇಬ್ಬರು ಕಾರ್ಮಿಕರ ಮಧ್ಯೆ ನಡೆದ ಜಗಳವು ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಉಡುಪಿ ಸಮೀಪದ ಕಟಪಾಡಿಯಲ್ಲಿ ಇಂದು ಸಂಜೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಓರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಇನ್ನೋರ್ವ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಣೇಶ್ ಮತ್ತು ಇನ್ನೋರ್ವನ ಮಧ್ಯೆ ಕೆಲಸದ ವಿಷಯದಲ್ಲಿ ಮಾತಿಗೆ ಮಾತು ಬೆಳೆದು ಜಗಳ ನಡೆದಿದೆ. ಜಗಳ ತಾರಕಕ್ಕೇರಿದ್ದು, ಇಬ್ಬರೂ ಹೊಡೆದಾಟ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದಾನೆ. ಸ್ಥಳೀಯರು ಮತ್ತು ಸಹಕಾರ್ಮಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಆತ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ ಸಿ ಪೂವಯ್ಯ ಸೇರಿದಂತೆ ಕಾಪು ಪೊಲೀಸರ ಭೇಟಿ ನೀಡಿದ್ದಾರೆ.