ಮಂಗಳೂರು: ಉದ್ಯೋಗ ಅರಸಿ ಮಂಗಳೂರಿಗೆ ಬಂದಿದ್ದ ಮೂಲತಃ ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ಎಂಬ ಯುವತಿ ನಾಪತ್ತೆಯಾಗಿದ್ದಾರೆ.
ಈ ಕುರಿತು ಆಕೆಯ ತಂದೆ ಕದ್ರಿ ಪೊಲೀಸರಿಗೆ ದೂರು ನೀಡಿದ್ದು, ಸೋನಿಯಾ ಎಂಟು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದು, ಬೆಂದೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿರುವುದಾಗಿ ಮನೆಯವರಿಗೆ ತಿಳಿಸಿದ್ದರು.
ಈ ನಡುವೆ ಇತ್ತೀಚೆಗೆ ಆಕೆಗೆ ಕರೆ ಮಾಡಿದರೂ ಸ್ವೀಕರಿಸದ ಕಾರಣ ಅಪಾರ್ಟ್‌ಮೆಂಟ್‌ನಲ್ಲಿ ಆಕೆಯ ಬಗ್ಗೆ ವಿಚಾರಿಸಲಾಗಿತ್ತು.
ಆದರೆ ಅಲ್ಲಿ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅಪಾರ್ಟ್‌ಮೆಂಟ್ ನವರು ಹೇಳುತ್ತಿದ್ದಾರೆ ಎಂದು ಸೋನಿಯಾ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.