ಈ ಭಾರೀ ಶಬರಿಮಲೆಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಶಬರಿಮಲೆಯಲ್ಲಿ ನಡೆದಂತಹ ಮನಕಲಕುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆಂದು ತಂದೆಯೊಂದಿಗೆ ಬಂದಿದ್ದಂತಹ ಪುಟ್ಟ ಮಾಲಾಧಾರಿ ಸ್ವಾಮಿ ನೂಕುನುಗ್ಗಲಿನ ನಡುವೆ ತಂದೆಯಿಂದ ಬೇರ್ಪಟ್ಟಿದ್ದು, ತಂದೆಯನ್ನು ಕಾಣದೆ, ಆ ಬಾಲಕ ಅಪ್ಪಾ.. ಅಪ್ಪಾ ಎಂದು ಜೋರಾಗಿ ಕೂಗಿದ್ದಾನೆ. ತಂದೆಯನ್ನು ಕಾಣದೆ ಗಾಬರಿಯಲ್ಲಿ ಅಳುತ್ತಿರುವ ಈ ಮಗುವಿನ ಅಸಹಾಯಕ ಸ್ಥಿತಿ ಭಾರೀ ಬೇಸರ ಉಂಟುಮಾಡುತ್ತಿದೆ.
ವೈರಲ್ ಆದ ವಿಡಿಯೋದಲ್ಲಿ ಶಬರಿಮಲೆಯಲ್ಲಿ ನೂಕುನುಗ್ಗಲಿನ ಕಾರಣ, ಬಸ್ಸಿನ ಒಳಗಡೆಯೇ ನಿಂತಿದ್ದ ಪುಟ್ಟ ಬಾಲಕನೊಬ್ಬ ತನ್ನ ತಂದೆ ಕಾಣಿಸುತ್ತಿಲ್ಲವೆಂದು ಗಾಬರಿಗೊಂಡು ಕಣ್ಣೀರಿಡುತ್ತಾ ಅಪ್ಪಾ ಅಪ್ಪಾ…. ಎಂದು ಜೋರಾಗಿ ಕೂಗಿ ಕರೆಯುತ್ತಾನೆ. ಮಗುವಿನ ಈ ಅಸಹಾಯಕ ಸ್ಥಿತಿಯನ್ನು ನೋಡಲಾರದೆ ಅಲ್ಲಿಗೆ ಪೋಲಿಸರೊಬ್ಬರು ಬಂದು, ಏನೆಂದು ವಿಚಾರಿಸುತ್ತಾರೆ. ಆ ಸಂದರ್ಭದಲ್ಲಿ ಆ ಬಾಲಕ ಕಣ್ಣೀರಿಡುತ್ತಾ, ಅಪ್ಪ ಎಲ್ಲಿ ಎಂದು ಪೋಲಿಸರ ಬಳಿ ಕೈ ಮುಗಿದು ಬೇಡಿಕೊಳ್ಳುತ್ತಿರುವ ಮನಕಲಕುವ ದೃಶ್ಯವನ್ನು ಕಾಣಬಹುದು.
ಈ ವಿಡಿಯೋ ಕ್ಲಿಪ್ನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಲಾಗಿದ್ದು ಕಮೆಂಟ್ ಗಳ ಮಹಾಪೂರವೇ ಹರಿದು ಬರುತ್ತಿದೆ.