ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಜೂನ್ 28ರಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರಿನ ಕೆಆರ್ ಪುರಂ ತಹಶಿಲ್ದಾರ್ ಆಗಿರುವ ಅಜಿತ್ ಕುಮಾರ್ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವರಾದ ಅಜಿತ್ ಕುಮಾರ್ಅ ವರ ಸಹಕಾರನಗರದಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ನಗದು ಹಣದ ಜೊತೆಗೆ ಚಿನ್ನಾಭರಣಗಳು ಸಹ ಪತ್ತೆಯಾಗಿದ್ದು. ಅವುಗಳನ್ನ ವಶ ಪಡೆದುಕೊಂಡು ಹಣದ ಮೂಲದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಅತ್ತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ಅಜಿತ್ ಕುಮಾರ್ ಮನೆ ಮೇಲೂ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.