ಬೆಂಗಳೂರು: ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
13 ಅಧಿಕಾರಿಗಳಿಗೆ ಸೇರಿ ರಾಜ್ಯದ 63 ಕಡೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ನಡೆಸಿದ್ದು, ಸುಮಾರು 200 ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ಮಾಡಿ ದಾಖಲಗಲನ್ನ ಪರಿಶೀಲನೆ ನಡೆಸಲಾಗುತ್ತಿದೆ.
ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ದಾಳಿ ನಡೆಸಿ ಶೋಧಕಾರ್ಯ ಆರಂಭಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಕಲಬುರಗಿಯಲ್ಲಿರುವ ಯಾದಗಿರಿ ಡಿಎಚ್‌ಓ ಡಾ. ಪ್ರಭುಲಿಂಗ್ ಮಾನಕರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಗೆ ಆರೋಪದ ಮೇಲೆ ಯಾದಗಿರಿ ಡಿಎಚ್‌ಓ ಡಾ. ಪ್ರಭುಲಿಂಗ್ ಮಾನಕರ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರಿನ ಬೆಸ್ಕಾಂ ಇಇ ಚೆನ್ನಕೇಶವ ಅವರ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರಿನಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ. ದಾಳಿ ವೇಳೆ 6 ಲಕ್ಷ ನಗದು, 3 ಕೆಜಿ ಚಿನ್ನ, 28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ಡೈಮಂಡ್ ಜುವೆಲರಿ, ಸೇರಿ 1.5 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ.