Site icon newsroomkannada.com

ಕಾಸರಗೋಡು – ನಾಪತ್ತೆಯಾಗಿದ್ದ ಟೀಚರ್ ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆ

ಕಾಸರಗೋಡು: ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬಳು ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಲವ್ ಜಿಹಾದ್ ನಡೆಸಿದ್ದಾರೆ ಎಂದು ಆರೋಪಿಸಿವೆ.

ಕಾಸರಗೋಡಿನ ಬದಿಯಡ್ಕದಲ್ಲಿ ಖಾಸಗಿ ಕಾಲೇಜಿನಲ್ಲಿ ಶಿಕ್ಷಕಿಯಾಗಿದ್ದ ಯುವತಿ ನಾಪತ್ತೆಯಾಗಿದ್ದಳು. ಮೇ.23ರಂದು ಮನೆಯಿಂದ ಹೊರಟ ಯುವತಿ ದಿಢೀರ್ ನಾಪತ್ತೆಯಾಗಿದ್ದಳು, ಈ ಕುರಿತಂತೆ ಯುವತಿಯ ತಂದೆ ಬದಿಯಡ್ಕದಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು.

ಈ ನಡುವೆ ಯುವತಿ ಹಾಗೂ ಯುವಕನೊಬ್ಬನ ಪೋಟೋ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಮದುವೆ ಕುರಿತಂತೆ ನೋಟಿಸ್ ಪತ್ತೆಯಾಗಿತ್ತು.ಮೇ 27 ರಂದು ರಿಜಿಸ್ಟರ್ ಕಚೇರಿಯಲ್ಲಿ ಜೋಡಿ ಮದುವೆಯಾಗಿ ಬಳಿಕ ಬದಿಯಡ್ಕ ಠಾಣೆಗೆ ಹಾಜರಾಗಿದ್ದರು. ಬಳಿಕ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸ್ವ ಇಚ್ಚೆಯಿಂದ ತೆರಳಿದ್ದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Exit mobile version