Site icon newsroomkannada.com

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನರಾರಂಭ

ಮಡಿಕೇರಿ: ಮದೆನಾಡು ಸಮೀಪದ ಕರ್ತೊಜಿಯಲ್ಲಿ ಮರ ಸಹಿತ ಭೂಕುಸಿತವಾಗಿದ್ದು, ಬಂದ್‌ ಆಗಿದ್ದ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ.

ಇದೀಗ ರಸ್ತೆಗೆ ಅಡ್ಡವಾಗಿ ಬಿದ್ದ ಮರ ಮತ್ತು ಮಣ್ಣನ್ನು ಜೆಸಿಬಿ ಯಂತ್ರ ಬಳಸಿ ತೆರವುಗೊಳಿಸಲಾಗಿದೆ. ಇದರಿಂದ ಕಳೆದ ಎರಡು ಗಂಟೆಯಿಂದ ಬಂದ್‌ ಆಗಿದ್ದ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿದೆ.

ಮರಸಹಿತ ಮಣ್ಣು ಬಿದ್ದು ರಸ್ತೆ ಬಂದ್‌ ಆದ ಕಾರಣ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಪಾಜೆಯ ಗಡಿಕಲ್ಲು ತನಕ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು ಫುಲ್ ರಶ್ ಆಗಿತ್ತು. ಇದೀಗ ತೆರವಾದ ಕಾರಣ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ. ಆದರೆ ಈ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಮತ್ತೆ ಭೂಕುಸಿತ ಉಂಟಾಗಿ ರಸ್ತೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Exit mobile version