ರೆಂಜೂಷಾ ಮೆನನ್ ಅವರ ನಿಧನದ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಸಾವಿನ ಸುದ್ದಿ ಮಲಯಾಳಂ ಕಿರುತೆರೆ ಉದ್ಯಮವನ್ನು ಬೆಚ್ಚಿಬೀಳಿಸಿದೆ. ಕರುತಮುತ್ತು ಮುಂತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
ಮಂಗಳವಾರ (ಅಕ್ಟೋಬರ್ 31) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಾಗ 35 ವರ್ಷದ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ನಟ ಕಿಶೋರ್ ಸತ್ಯ ಅಭಿಮಾನಿಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದಾರೆ. ‘ಮಲಯಾಳಂ ಟಿವಿ ಉದ್ಯಮದಲ್ಲಿ ಮತ್ತೊಂದು ಅನಿರೀಕ್ಷಿತ ಸಾವಿನ ಸುದ್ದಿ ಬಂದಿದೆ. ಡಾಕ್ಟರ್ ಪ್ರಿಯಾ ಹೃದಯ ಸ್ತಂಭನದಿಂದ ನಿಧನರಾದರು. ಸಾಯುವ ವೇಳೆ ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ನವಜಾತ ಶಿಶು ಸದ್ಯ ಐಸಿಯುನಲ್ಲಿದೆ. ಆಕೆಗೆ ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ, ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದರು, ಅಲ್ಲಿಯೇ ಆಕೆಗೆ ಹೃದಯ ಸ್ತಂಭನವಾಯಿತು.