ಮಲ್ಕಂಗಿರಿ: ಒಡಿಶಾದ ಮಲ್ಕಂಗಾರಿ ಜಿಲ್ಲೆಯ ಜಾರಪಳ್ಳಿ ಪಂಚಾಯಿತಿ ವ್ಯಾಪ್ತಿಯ ತಾಳಿಮೇಟ ಗ್ರಾಮದಲ್ಲಿ ವಿಷಯುಕ್ತ ಹಣ್ಣು ತಿಂದು 11 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ
ನಡೆದಿದೆ.
ಮಕ್ಕಳು ಶಾಲೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರಾಮದ ಹೊರವಲಯದಲ್ಲಿದ್ದ ಗಿಡವೊಂದರ ವಿಷಯುಕ್ತ ಹಣ್ಣುಗಳನ್ನು ಸೇವನೆ ಮಾಡಿದ್ದಾರೆ. ಹಣ್ಣು ತಿಂದ ಕೆಲವೇ ನಿಮಿಷಗಳಲ್ಲಿ ವಾಂತಿ ಮಾಡಿಕೊಂಡಿದ್ದಾರೆ. ಅಲ್ಲದೆ, ಅತೀವ್ರ ಹೊಟ್ಟೆನೋವು ಕಾಣಿಸಿಕೊಂಡು, ಅಸ್ವಸ್ಥರಾಗಿದ್ದಾರೆ. ಕೂಡಲೇ ಸ್ಥಳೀಯರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಬಳಿಕ ಇದೀಗ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.