ಮಂಗಳೂರು: ಅನಾಮಿಕ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಎಲ್ಲರನ್ನೂ ಭಯಭೀತರನ್ನಾಗಿಸಿದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಮುಲ್ಕಿ ಬಳಿ ನಡೆದಿದೆ.
ಇಲ್ಲಿನ ಕೋಲ್ನಾಡು ಇಂಡಸ್ಟ್ರಿಯಲ್ ಏರಿಯಾದಲ್ಲಿ ಇಂದು (ಸೆ.30)ರಂದು ಈ ಘಟನೆ ನಡೆದಿದ್ದು, ಇಲ್ಲಿರುವ ಸುಮಾರು 300 ಅಡಿ ಎತ್ತರದ ಮೊಬೈಲ್ ಟವರ್ ಒಂದರ ತುತ್ತ ತುದಿಯನ್ನು ಅನಾಮಿಕನೊಬ್ಬ ಏರಿದ್ದಾನೆ.
ಈತ ಟವರ್ ಏರಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಮುಲ್ಕಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಇದೀಗ ಈ ವ್ಯಕ್ತಿಯನ್ನು ಮೊಬೈಲ್ ಟವರ್ ನಿಂದ ಕೆಳಗಿಳಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನೆಗೆ ಕಾರಣ ಮತ್ತು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ.