ಮಂಗಳೂರು: ಸಮುದ್ರ ತೀರದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬುವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ತಿಳಿಯದೇ ಅದನ್ನು ತುಳಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಮೀಪದ ನಾರಾಯಣ ಮೂಲ್ಯ ಎಂಬುವರ ಮನೆ ಮೇಲೆ ಮರದ ಗೆಲ್ಲು ಬಿದ್ದು ಹಾನಿಯಾಗಿದೆ.