Site icon newsroomkannada.com

Mangalore: ಹಿಂದೂ ಅವಹೇಳನ ಪ್ರಕರಣ; ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ FIR

ಮಂಗಳೂರು, ಫೆ.15: ಮಂಗಳೂರಿನ ಜೆರೋಸಾ ಶಾಲೆಯಲ್ಲಿ (Gerosa School) ಹಿಂದೂ ಅವಹೇಳನ ಪ್ರಕರಣ ಸಂಬಂಧ ಬಿಜೆಪಿಯ ಇಬ್ಬರು ಶಾಸಕರ (BJP MLA) ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ FIR ದಾಖಲಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamath) ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ (Bharath Shetty) ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ
ಅಲ್ಲದೆ ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ VHP ಮುಖಂಡ ಶರಣ್ ಪಂಪ್​ವೆಲ್, ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 153A, 295A, 505(2), 506, 149ರಡಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್​ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಹೆಸರು ಉಲ್ಲೇಖಿಸಲಾಗಿದೆ. ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು FIRನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
[ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದ್ದು. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದರು ಎಂದು ಪಾಂಡೇಶ್ವರ ಠಾಣೆ ಪೊಲೀಸರು ದಾಖಲಿಸಿರುವ ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾರೆ.

Exit mobile version