ಮಂಗಳೂರು : ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆಯಾಗಿದೆ. ನಾಳೆ ರಾತ್ರಿ 7.45ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಿಂದ ರೋಡ್ ಶೋ ಆರಂಭವಾಗಲಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸುನಿಲ್ ಕುಮಾರ್, ಸಂಜೆ 7.45ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಆರಂಭವಾಗಿ ನವಭಾರತ್ ವೃತ್ತದಲ್ಲಿ ಸಂಪನ್ನಗೊಳ್ಳಲಿದೆ. ವಿಜಯ ಸಂಕಲ್ಪ ರೋಡ್ ಶೋ ನಲ್ಲಿ ಭಾಗವಹಿಸಲು ಅಪೇಕ್ಷಿಸುವವರು ಸಂಜೆ 6.45 ರಿಂದ 7 ಗಂಟೆ ಒಳಗೆ ಸ್ಥಳದಲ್ಲಿ ಹಾಜರಿರುವಂತೆ ಅವರು ತಿಳಿಸಿದರು.
ಈ ಹಿಂದೆ ಮೋದಿಯವರು ನಗರದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯಲ್ಲಿ ಸಮಾವೇಶದ ಆಯೋಜನೆ ಆಗಿತ್ತು. ಸಮಾವೇಶಕ್ಕೆ ಚಪ್ಪರ ಮುಹೂರ್ತವೂ ಆಗಿತ್ತು. ಆದರೆ ಏಕಾಏಕಿ ಸಮಾವೇಶ ರದ್ದುಗೊಂಡು ರೋಡ್ ಶೋ ಆಯೋಜನೆಗೊಂಡಿದೆ. ಆದರೆ ಈ ಹಿಂದೆ 6 ಗಂಟೆಗೆ ರೋಡ್ ಶೋ ನಿಗದಿಯಾಗಿತ್ತು. ಸದ್ಯ ಸಮಯ ಬದಲಾವಣೆಗೊಂಡು 7.45ಕ್ಕೆ ರೋಡ್ ಶೋ ಆರಂಭವಾಗಲಿದೆ.