ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ದಕ್ಷಿಣ ಅಳವಡಿಸಿರುವ ಸೂಚನಾ ಫಲಕದಲ್ಲಿ ಕನ್ನಡ ಭಾಷೆಯೇ ಮಾಯವಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ನಿಲ್ದಾಣದಲ್ಲಿ ಅವಡಿಸಿರುವ ಒಂದು ಫಲಕದಲ್ಲಿ “ಮಂಗಳೂರು ಜಂಕ್ಷನ್ ರನ್ನಿಂಗ್ ರೂಮ್” ಎಂದು ಇಂಗ್ಲಿಷ್, ಹಿಂದಿ ಮತ್ತು ಮಲಯಾಳಂನಲ್ಲಿ ಭಾಷೆಯಲ್ಲಿ ಮಾತ್ರ ಬರೆಯಲಾಗಿದೆ.
ಇದನ್ನು ನೋಡಿದ ರೈಲ್ವೆ ಯೂನಿಯನ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಪಾಲಕ್ಕಾಡ್ ರೈಲ್ವೆ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ಹೆಚ್ಚುವರಿಯಾಗಿ, ಅವರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿದೆ.