main logo

ಮಂಗಳೂರು: ಶಿಕ್ಷಕಿಯ ನೀರಿನ ಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು

ಮಂಗಳೂರು: ಶಿಕ್ಷಕಿಯ ನೀರಿನ ಬಾಟಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು

ಮಂಗಳೂರು: ಮಂಗಳೂರಿನ ಉಳ್ಳಾಲದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಕಡಿಮೆ ಅಂಕ ನೀಡಿದರೆಂಬ ದ್ವೇಷಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮುಗಿದ ಮಾತ್ರೆ ಹಾಕಿದ್ದಾರೆ.

ಇಬ್ಬರು ಶಿಕ್ಷಕಿಯರು ಈ ಮಾತ್ರೆ ಬೆರೆತ ನೀರನ್ನು ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಓರ್ವ ಶಿಕ್ಷಕಿಗೆ ಮುಖದಲ್ಲಿ ಊತ ಉಂಟಾಗಿದೆ. ನೀರಿನ ರುಚಿಯಲ್ಲಿ ಬದಲಾವಣೆ ಕಂಡುಬಂದು ಸೂಕ್ಷ್ಮವಾಗಿ ಗಮನಿಸಿದಾಗ ನೀರಲ್ಲಿ ಮಾತ್ರೆಗಳಿರುವುದು ಕಂಡುಬಂದಿದೆ. ಈ ಕುರಿತು ವಿಚಾರಿಸಿ ಸಿಸಿಟಿವಿ ಗಮನಿಸಿದಾಗ ವಿದ್ಯಾರ್ಥಿನಿಯರ ಕೃತ್ಯ ಬೆಳಕಿಗೆ ಬಂದಿದೆ. ಉಳ್ಳಾಲದ ಖಾಸಗಿ ಶಾಲೆಯಲ್ಲಿ ನಡೆದ ಘಟನೆ ಇದಾಗಿದ್ದು, 6 ನೇ ತರಗತಿ ವಿದ್ಯಾರ್ಥಿನಿಯರ ಈ ಅಟಾಟೋಪ ದೃಷ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಇದೀಗ ಶಾಲೆಯ ಆಡಳಿತ ಮಂಡಳಿ ತುರ್ತು ಎಸ್ ಡಿಎಂಸಿ ಸಭೆ ನಡೆಸಿ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

Related Articles

Leave a Reply

Your email address will not be published. Required fields are marked *

error: Content is protected !!