main logo

ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ

ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ

ಮಂಗಳೂರು: ತನ್ನ ಲವರ್ ಔಟಿಂಗ್ ಬರಲಿಲ್ಲ ಅಂತಾ ಆಕೆ ಕೆಲಸ ಮಾಡುತ್ತಿದ್ದ ಕಟ್ಟಡಕ್ಕೆ ಯುವಕನೊಬ್ಬ ಕಲ್ಲು ತೂರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಕಲ್ಲೆಸೆತದಿಂದ ಕಟ್ಟಡದ ಗಾಜು ಪುಡಿಯಾಗಿದ್ದರಿಂದ ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ವಿವೇಕ್‌ ಪ್ರೀತಿಯಲ್ಲಿ ಬಿದ್ದಿದ್ದ. ಅದರಂತೆ ನಿನ್ನೆ (ನವೆಂಬರ್ 2) ಸಂಜೆ ಔಟಿಂಗ್​ಗೆ ಬರುವಂತೆ ಕರೆ ಮಾಡಿದ್ದಾನೆ.

ಆದರೆ, ಯುವತಿ ಔಟಿಂಗ್ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ ವಿವೇಕ್, ಆಕೆ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ಎಸೆದಿದ್ದಾನೆ. ಘಟನೆಯಲ್ಲಿ ಕಟ್ಟಡದ ಗಾಜು ಪುಡಿಯಾಗಿದ್ದು, ಸಾರ್ವಜನಿಕರು ವಿವೇಕ್​ನನ್ನು ಹಿಡಿದು ಥಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!