Site icon newsroomkannada.com

ದೆಹಲಿ ಗಣರಾಜ್ಯೋತ್ಸವಕ್ಕೆ ಕರಾವಳಿಯ ಮಣಿಕಂಠಗೆ ಆಹ್ವಾನ

‌ಕುಂದಾಪುರ:  ಆದರೆ ಅಂತಹವರಿಗೆ ಮಾದರಿಯಾಗಿರುವ ಕುಂದಾಪುರದ ಮಣಿಕಂಠ ಅವರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಸಾಲ ಪಡೆದು, ಸ್ವಉದ್ಯೋಗ ನಡೆಸಿ ಸದ್ಬಳಕೆ ಮಾಡಿಕೊಂಡಿರುವ ಕಾರಣಕ್ಕೆ ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದಿದ್ದಾರೆ.

ಯಾರಿವರು: ಮಣಿಕಂಠ (38) ಅವರು ಕಂದಾಪುರದ ಶಾಸ್ತ್ರೀ ಸರ್ಕಲ್‌ನಲ್ಲಿ ಲಿಡ್ಕರ್‌ನ ಪಾದರಕ್ಷೆ ರಿಪೇರಿ ಮಾಡುವ ಪೆಟ್ಟಿಗೆ ಅಂಗಡಿ ನಡೆಸುತ್ತಿದ್ದಾರೆ. ಮೂಲತಃ ಭದ್ರಾವತಿಯವರಾದ ಅವರ ಅಜ್ಜ ಮುನುಸ್ವಾಮಿ ಸುಮಾರು 50 ವರ್ಷಗಳ ಹಿಂದೆ ಇಲ್ಲಿಗೆ ಬಂದು ಈ ಚಪ್ಪಲಿ ರಿಪೇರಿ ಅಂಗಡಿಯನ್ನು ಆರಂಭಿಸಿದರು. ಸ್ವಲ್ಪ ಸಮಯ ಮಣಿಕಂಠ ಅವರ ತಂದೆ ಇದನ್ನು ಮುಂದುವರಿಸಿದರು, ಅವರ ಅನಾರೋಗ್ಯದ ಮಣಿಕಂಠ ಈ ಕುಲಕಸುಬನ್ನು ಮುನ್ನಡೆಸುತ್ತಿದ್ದಾರೆ. ಚಪ್ಪಲಿ, ಕೊಡೆ ರಿಪೇರಿ ಮಾಡಿ ಬರುವ ಅಷ್ಟಿಷ್ಟು ಆದಾಯದಲ್ಲಿಯೇ ತಾಯಿ, ತಮ್ಮ, ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದ ಮಣಿಕಂಠ, ಅಂಗಡಿಯಲ್ಲಿ ಮಾರಾಟಕ್ಕೆ ಚಪ್ಪಲಿ, ಕೊಡೆ ಮತ್ತು ರಿಪೇರಿಗೆ ಬೇಕಾದ ಇತರ ಕಚ್ಚಾ ಸಾಮಗ್ರಿ ಖರೀದಿಗೆ ಅಲ್ಲಿ ಇಲ್ಲಿ ದುಬಾರಿ ಬಡ್ಡಿ ತೆತ್ತು ಸಾಲ ಪಡೆಯುತ್ತಿದ್ದರು. ಆದಾಯವೆಲ್ಲ ಸಾಲದ ಬಡ್ಡಿಗೆ ಸರಿದೂಗುತ್ತಿತ್ತು. ಎರಡು ವರ್ಷಗಳ ಹಿಂದೆ ಕೌಶಲಾಭಿವೃದ್ಧಿ ಇಲಾಖೆ ಕುಂದಾಪುರ ಪುರಸಭೆ ಮೂಲಕ ಅವರಿಗೆ ಪಿಎಂ ಸ್ವನಿಧಿ (ಬೀದಿ ವ್ಯಾಪಾರಿಗಳಿಗೆ ನೀಡುವ ಸಾಲ) ಯೋಜನೆಯಡಿ 10 ಸಾವಿರ ರು. ಸಾಲ ನೀಡಿತು. ಶೇ.7ರ ಬಡ್ಡಿ ದರದ ಈ ಸಾಲ ಮರುಪಾವತಿಗೆ 12 ತಿಂಗಳು ಅವಧಿ ಇದ್ದರೂ ಮಣಿಕಂಠ 2,500 ರು.ನಂತೆ ಕಟ್ಟಿ ಐದೇ ತಿಂಗಳಲ್ಲಿ ತೀರಿಸಿದರು.

ಸಮಯಕ್ಕೆ ಸರಿಯಾಗಿ ಸಾಲ ಕಟ್ಟಿದ್ದನ್ನು ಮೆಚ್ಚಿ ಇಲಾಖೆ ಇನ್ನೂ 20 ಸಾವಿರ ರು. ಸಾಲ ನೀಡಿತು. ಅದರಿಂದ ಈ ಮಳೆಗಾಲದಲ್ಲಿ ಬೇಕಾಗುವ ಚಪ್ಪಲಿ ಮತ್ತು ಕೊಡೆಗಳನ್ನು ತಂದು ಮಾರಾಟ ಮಾಡಿ ಯಶಸ್ವಿಯೂ ಆದರು. ಲಾಭವನ್ನೂ ಗಳಿಸಿದರು, ಐದೇ ತಿಂಗಳಲ್ಲಿ ಪೂರ್ತಿ ಸಾಲ ಮರುಪಾವತಿಸಿದರು. 10 ಸಾವಿರ ಸಾಲವನ್ನು ವರ್ಷಾನುಗಟ್ಟಲೇ ಮರುಪಾವತಿಸದೆ ಸತಾಯಿಸುವವರ ಮಧ್ಯೆ ಮಣಿಕಂಠ ಅವರ ಪ್ರಾಮಾಣಿಕತೆಗಾಗಿ ಇಲಾಖೆ ಮತ್ತೆ 50 ಸಾವಿರ ರು. ಸಾಲ ಮಂಜೂರು ಮಾಡಿದೆ. ಅದರಲ್ಲೀಗ ತನ್ನ ಚಪ್ಪಲಿ ಅಂಗಡಿ ಪಕ್ಕ ಸೀಟ್ ಕುಶನ್ ಅಂಗಡಿ ಹಾಕಿರುವ ತಮ್ಮನಿಗೂ ಸಹಾಯ ಮಾಡುವುದಾಗಿ ಹೇಳುತ್ತಾರೆ ಮಣಿಕಂಠ.

Exit mobile version