Site icon newsroomkannada.com

ಪೋಷಕರು ನಾಯಿ ಕೊಡಿಸಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ

ಹುಬ್ಬಳ್ಳಿ: ದುಬಾರಿ ನಾಯಿ ಮೇಲಿನ ಪ್ರೀತಿ ಓರ್ವ ಯುವಕನನ್ನು ಬಲಿಪಡೆದಿದೆ. ತಾನು ಕೇಳಿದ ನಾಯಿಯನ್ನು ಪೋಷಕರು ಕೊಡಿಸಲಿಲ್ಲವೆಂದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಮಿಷನ್ ಕಾಂಪೌಂಡ್‌ನಲ್ಲಿ ಈ ಘಟನೆ ನಡೆದಿದ್ದು, ಅಲೆನ್ ಭಸ್ಮೆ (24) ಆತ್ಮಹತ್ಯೆಗೆ ಶರಣಾದ ಯುವಕ. ಅಲೆನ್ ನಾಯಿ ಪ್ರೇಮಿಯಾಗಿದ್ದು, 2 ಲಕ್ಷ ರೂ. ಮೌಲ್ಯದ ನಾಯಿಮರಿಯನ್ನು ಕೊಡಿಸುವಂತೆ ತಾಯಿಯ ಬಳಿ ಹಠ ಮಾಡುತ್ತಿದ್ದ

ಮಗನ ಕಾಟಕ್ಕೆ ಬೇಸತ್ತು ಅಲೆನ್ ತಾಯಿ ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದ ಅಲೆನ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಬಗ್ಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version