Site icon newsroomkannada.com

ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಚಿಂತನೆ: ಪಶುಸಂಗೋಪನಾ ಸಚಿವ ವೆಂಕಟೇಶ್‌

ಬೆಂಗಳೂರು: ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕ ಒಕ್ಕೂಟಗಳ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಚಿಂತಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ. ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ. ಹಾಲು ಒಕ್ಕೂಟ ಮತ್ತು ಹಾಲು ಉತ್ಪಾದಕರ ಉಳಿಸುವ ಕಾರಣಕ್ಕೆ ಅನಿವಾರ್ಯವಾಗಿ ಹಾಲಿನ ದರ ಪರಿಷ್ಕರಣೆ ಮಾಡಲೇಬೇಕಿದೆ ಎಂದು ಹೇಳಿದ್ದಾರೆ.

ಪರಿಷತ್‌ನಲ್ಲಿ ಮಾತನಾಡಿ ಅವರು, ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ‌ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೋಜೆಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರ ನೀಡಿದ ಸಚಿವರು ಹೆಚ್ಚು ಮಾಡುವ ದರದಲ್ಲಿ ಶೇ.೭೦ ರನ್ನು ರೈತರಿಗೆಉಳಿದ ಶೇ.೪೦ ರಷ್ಟುನ್ನುಒಕ್ಕೂಟಗಳಿಗೆ ಹಂಚುವ ಚಿಂತನೆಯಿದೆ ಎಂದು ಹೇಳಿದ್ದಾರೆ.

Exit mobile version