Site icon newsroomkannada.com

ಆದಷ್ಟು ಬೇಗ ಗೃಹಜ್ಯೋತಿ ಅರ್ಜಿ ಹಾಕಿ ಇಲ್ಲಾಂದ್ರೆ ಬಿಲ್‌ ಬರುತ್ತದೆ: ಇಂಧನ ಸಚಿವ

ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್​​ಲೈನ್ ಇಲ್ಲ. ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತದೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್ ನೀಡಲಾಗುವುದು. ಗೃಹಜ್ಯೋತಿಗೆ ಅರ್ಜಿ ಹಾಕದಿದ್ರೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೇದು ಎಂದರು.

Exit mobile version