Site icon newsroomkannada.com

ಪರಶುರಾಮ ಮೂರ್ತಿ ಪರಿಶೀಲನೆ ನಡೆಸಿದ ಸಚಿವೆ ಹೆಬ್ಬಾಳ್ಕರ್‌ ಹೇಳಿದ್ರು ಅಸಲಿ ಸತ್ಯ

Minister Hebbalkar, who inspected Parashurama Murthy, said the truth was true

ಕಾರ್ಕಳ: ಉಮಿಕಲ್‌ ಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಪರಶುರಾಮ ಮೂರ್ತಿ ಅಸಲಿ ಅಥವಾ ನಕಲಿ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಅದು ಅರ್ಧ ನಕಲಿ- ಅರ್ಧ ಅಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಪರಶುರಾಮ ಪ್ರತಿಮೆ ಇರುವ ಥೀಂ ಪಾರ್ಕ್‌ಗೆ ಭೇಟಿನೀಡಿ ಪರಿಶೀಲಿಸಿದ ಸಚಿವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, `ಪರಶುರಾಮನ ಪ್ರತಿಮೆಯ ಕೈ, ಮುಖ ಸೇರಿದಂತೆ ಪ್ರತಿಮೆಯ ಅರ್ಧ ಭಾಗವನ್ನೇ ಬದಲಿಸಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದರು.

ಪರಶುರಾಮ ಪ್ರತಿಮೆ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲಾಗಿದೆ. ವಿಧಾನಸಭಾ ಚುನಾವಣೆ ಹತ್ತಿರ ಇರುವಾಗ ರಾಜಕೀಯ ಲಾಭಕ್ಕಾಗಿ ಪ್ರತಿಮೆ ನಿರ್ಮಾಣ ಕಾಮಗಾರಿಯನ್ನು ವೇಗವಾಗಿ ಮುಗಿಸಲು ಹೋಗಿ ಹಲವು ತಪ್ಪುಗಳನ್ನು ಎಸಗಿರುವುದು ಕಂಡುಬಂದಿದೆ. ಯಾವ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದರು.

ಸದ್ಯ ಪ್ರತಿಮೆ ವಿಚಾರದಲ್ಲಿ ರಾಜಕೀಯ ಮಾಡುವುದಕ್ಕಿಂತ ಜನರ ಸುರಕ್ಷತೆ ಮುಖ್ಯವಾಗಿದೆ. ಪ್ರತಿಮೆ ಎತ್ತರದ ಪ್ರದೇಶದಲ್ಲಿರುವುದರಿಂದ ಮಳೆ ಗಾಳಿಗೆ ಬಿದ್ದು ಅವಘಡಗಳಾದರೆ ಯಾರು ಹೊಣೆ ಎಂಬ ಆತಂಕ ಕಾಡುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಮೆ ಸುರಕ್ಷಿತವಾಗಿದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿಮೆ ನಿರ್ಮಾಣ ಮಾಡಿರುವ ಬೆಂಗಳೂರಿನ ಕಲಾವಿದರಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

Exit mobile version