ತ್ರಿಶ್ಶೂರ್ (ಕೇರಳ) : ಕೇರಳದ ಗುರುವಾಯೂರಿನಲ್ಲಿರುವ ) ಪ್ರಸಿದ್ಧ ಶ್ರೀಕೃಷ್ಣ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ)ಅವರು ಬುಧವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮೋದಿ ಸಾಂಪ್ರದಾಯಿಕ ಮಲಯಾಳಿ ಶೈಲಿಯಲ್ಲಿ ಬಿಳಿ ಮುಂಡು (ಧೋತಿ), ಶರ್ಟ್ ಮತ್ತು ಶಾಲು ಧರಿಸಿದ್ದರು. ಗುರುವಾಯೂರು ದೇವಾಲಯದಲ್ಲಿ ನಡೆದ ಬಿಜೆಪಿ ನಾಯಕ , ನಟ ಸುರೇಶ್ ಗೋಪಿ ಅವರ ಮಗಳು ಭಾಗ್ಯಾ ಸುರೇಶ್ ಅವರ ಮದುವೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ತಾಳಿ ಕಟ್ಟಿದ ನಂತರ ನವ ದಂಪತಿಗಳು ಪರಸ್ಪರ ಹಾರ ಬದಲಾಯಿಸುವಾಗ ಮೋದಿಯವರೇ ದಂಪತಿ ಕೈಗೆ ಹಾರ ಕೊಟ್ಟಿದ್ದಾರೆ.
Pm modhi ಸುರೇಶ್ ಗೋಪಿ ಮಗಳ ಮದುವೆಯಲ್ಲಿ ಭಾಗಿ
