ಮೂಡುಬಿದಿರೆ: ನಾಪತ್ತೆಯಾಗಿದ್ದ ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆ ಪ್ರಥಮ ವರ್ಷದ ಬಿಪಿಟಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಆದಿರಾ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾರೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ(19) ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಬಿಪಿಟಿ ಶಿಕ್ಷ ಣ ಪಡೆಯುತ್ತಿದ್ದುಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ ನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿದ್ದರು. ಬಳಿಕ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಆಕೆ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದರು. ಈಕೆ ಹಾಸ್ಟೆಲ್ ನಲ್ಲಿ ವಾಸವಾಗಿ ಶಿಕ್ಷಣ ಪಡೆಯುತ್ತಿದ್ದರು. ಇದೀಗ ಬೈಂದೂರಿನ ನಿವಾಸಿಯಾಗಿರುವ ಪ್ರಿಯಕರನನ್ನು ಮದುವೆಯಾಗಿ ಪತ್ತೆಯಾಗಿದ್ದಾರೆ.