Site icon newsroomkannada.com

ಉಡುಪಿ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ: ಹಿಂಜಾವೇ ಕಾರ್ಯಕರ್ತರ ಬಂಧನ

ಉಡುಪಿ: ನೈತಿಕ ಪೊಲೀಸ್ ಗಿರಿ ತೋರ್ಪಡಿಸಿದ ಐವರು ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಕಾರ್ಕಳ ಪೊಲೀಸ್ ಬಂಧಿಸಿದ್ದಾರೆ.

ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಬಂಧಿತರು ಎಂದು ತಿಳಿದುಬಂದಿದೆ.

ಮಂಗಳೂರಿನ ಹೆಸರಾಂತ ಕಾಲೇಜು ವೊಂದರ ವಿಭಿನ್ನ ಕೋಮಿನ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರಿಗೆ ಅಡ್ಡಗಟ್ಟಿ ಜಾಗರಣವೇದಿಕೆಯ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ.

ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ.

ಈ ವೇಳೆ ಕಾರಿನಲ್ಲಿದ್ದ ಮಹಿಳೆಯರು ನೇರವಾಗಿ 112ಗೆ ಕರೆ ಮಾಡಿ ಘಟನೆಯ ಕುರಿತು ಪೊಲೀಸ್ ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ , ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ಭೇಟಿ ನೀಡಿದ್ದಾರೆ.

Exit mobile version