ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಸದ್ಯ ಪಣಂಬೂರು ಪೊಲೀಸರು ಮೂರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಘಟನೆ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಣಂಬೂರು ಬೀಚ್ಗೆ ಕೇರಳದ ಯುವಕ ಹಾಘೂ ಬೆಂಗಳೂರಿನ ಯುವತಿ ಬಂದಿದ್ದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕ-ಯುವತಿಯನ್ನು ತಡೆದಿದ್ದಾರೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪಣಂಬೂರು ಪೊಲೀಸರು ಮೂರು ಮಂದಿ ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.