Site icon newsroomkannada.com

ರಷ್ಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 70ಕ್ಕೂ ಹೆಚ್ಚು ಮಂದಿ ಬಲಿ

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಐವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ, ಈ ಘಟನೆಯಲ್ಲಿ 70ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಮಾಲ್‌ ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಉಗ್ರರು ಅಮಾಯಕರ ಜೀವ ಬಲಿತೆಗೆದುಕೊಂಡಿದ್ದಾರೆ.

ಗುಂಡಿನ ದಾಳಿ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಸ್ಫೋಟ ಸಂಭವಿಸಿದೆ. ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಗುಂಡಿನ ದಾಳಿಯ ಬಳಿಕ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ರಷ್ಯಾದ ಭದ್ರತಾ ಸಂಸ್ಥೆ ಎಫ್‌ಎಸ್‌ಬಿ ಹೇಳಿದೆ.

Exit mobile version