Site icon newsroomkannada.com

ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ‘ಕಾವೇರಿ’ ಮಾತೆ

ಮಡಿಕೇರಿ: ತಲಕಾವೇರಿಯಲ್ಲಿ “ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಆವಿರ್ಭವಿಸಿದ್ದಾಳೆ. ತಡರಾತ್ರಿ 1 ಗಂಟೆ 27 ನಿಮಿಷಕ್ಕೆ ಸರಿಯಾಗಿ ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ತೀರ್ಥೋದ್ಭವವಾಗಿದೆ. ಈ ತೀರ್ಥೋದ್ಭವದ ದರ್ಶನ ಪಡೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಈ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಭಕ್ತರ ಮೇಲೆ ಅರ್ಚಕರು ಕಾವೇರಿ ಕಾವೇರಿ ನೀರನ್ನು ಎರಚಿದ್ದು, ತೀರ್ಥ ಪ್ರೋಕ್ಷಣೆಯಿಂದ ಭಕ್ತರು ಪುನೀತರಾದರು.
ಪ್ರಧಾನ ಅರ್ಚಕ ಗುರುರಾಜ್​ ಆಚಾರ್​ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಮುಂಜಾಗ್ರತಾ ಕ್ರಮವಾಗಿ ಸಂಜೆ 4 ಗಂಟೆಯಿಂದಲೇ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿತ್ತು. ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿತ್ತು.

Exit mobile version