main logo

ಮಂಗಳೂರಿನ ಈ ಪ್ರದೇಶಗಳಲ್ಲಿ ಹಾರ್ನ್ ಮಾಡಿದ್ರೆ ವಾಹನ ಚಾಲಕರಿಗೆ 2000 ರೂ.ವರೆಗೂ ದಂಡ

ಮಂಗಳೂರಿನ ಈ ಪ್ರದೇಶಗಳಲ್ಲಿ ಹಾರ್ನ್ ಮಾಡಿದ್ರೆ ವಾಹನ ಚಾಲಕರಿಗೆ 2000 ರೂ.ವರೆಗೂ ದಂಡ

ಮಂಗಳೂರು: ಮಂಗಳೂರು ನಗರ ಪ್ರದೇಶದಲ್ಲಿ ಶಬ್ದಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ “ಹಾರ್ನ್ ನಿಷೇಧಿತ ಪ್ರದೇಶ” ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಹಾರ್ನ್ ಹಾಕಿದವರ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನ ಚಾಲಕರು ಅನಾವಶ್ಯಕವಾಗಿ ಕರ್ಕಶ ಹಾರ್ನ್ ಹಾಕುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜು ಹಾಗೂ ಆಸ್ಪತ್ರೆಗಳ ಪ್ರದೇಶದಲ್ಲಿ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕೆಲವು ಪ್ರದೇಶವನ್ನು “ಹಾರ್ನ್ ನಿಷೇಧಿತ ಪ್ರದೇಶ” ಎಂದು ಘೋಷಿಸಲಾಗಿದೆ.

ನಿಷೇಧಿತ ಪ್ರದೇಶಗಳ ವಿವರ: 

1.ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲಿನ ಪ್ರದೇಶ :

*ರಾವ್ & ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.

*ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್ ವರೆಗೆ.
*ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ

2) ಹಂಪನಕಟ್ಟೆ ಜಂಕ್ಷನ್‌:
*ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್ ವರೆಗಿನ ಪ್ರದೇಶ.
*ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್ (Causality Gate) ನಿಂದ ಮುತ್ತಪ್ಪ ಗುಡಿಯ ವರೆಗೆ.
*ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನ ಸೌಧ ಕಟ್ಟಡದ ವರೆಗೆ.

3) ಡಾ. ಅಂಬೇಡ್ಕರ್ ವೃತ್ತದ ಸುತ್ತಲಿನ ಪ್ರದೇಶ
* ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
* ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
* ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
* ಬಾವುಟಗುಡ್ಡ (ಮಹಿಳಾ ಸಭಾ ಕಟ್ಟಡ) ದಿಂದ ಅಂಬೇಡ್ಕರ್ ವೃತ್ತದ ವರೆಗೆ.

4) ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್( ಅತ್ತಾವರ ನ್ಯೂ ರೋಡ್) ತಿರುವಿನವರೆಗೆ.

5) ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ

6) ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀಟರ್ ಪ್ರದೇಶ

ವಾಹನ ಚಾಲಕರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ.

ಭಾರತೀಯ ಮೋಟಾರು ವಾಹನ ಅಧಿನಿಯಮ (ತಿದ್ದುಪಡಿ) 2019 ರ ಕಲಂ 194 (ಎಫ್) ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ 1000 ರೂ. ದಂಡವನ್ನು ಹಾಗೂ ಎರಡನೇಯ ಹಾಗೂ ತದನಂತರದ ಪ್ರತಿ ಉಲ್ಲಂಘನೆಗೆ 2000 ರೂ. ದಂಡವನ್ನು ವಿಧಿಸಲಾಗುವುದು ಎಂದು ಪೊಲೀಸ್‌ ಪ್ರಕಟನೆಯಲ್ಲಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

error: Content is protected !!