ಆಕೆಯ ಕೊಲೆಗೆ ಕಾರಣವೇನು ?
ಕೋಲಾರ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ (Wife) ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಕೆಜಿಎಫ್ನ (KGF) ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಪವಿತ್ರ (36) ಎಂದು ಗುರುತಿಸಲಾಗಿದೆ. ಮೃತಳ ಪತಿ ಲೋಕೇಶ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಮಹಿಳೆ ಇಂದು (ಬುಧವಾರ) ಸಂಜೆ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ಬರುತ್ತಿರುವ ವೇಳೆ ಆರೋಪಿ ಪತಿ ಮಹಿಳೆಯ ದೇಹದ ಹಲವೆಡೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆಕೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅಸುನೀಗಿದ್ದಾಳೆ. ಕೊಲೆಯ ಬಳಿಕ ಆತ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಪೊಲೀಸರು (Police) ಬಲೆ ಬೀಸಿದ್ದಾರೆ.
ಲೊಕೇಶ್ ಹಾಗೂ ಪವಿತ್ರ ನಡುವಿನ ಸಂಬಂಧ ಇತ್ತೀಚೆಗೆ ಕೆಟ್ಟಿತ್ತು. ಈ ವಿಚಾರವಾಗಿ ಗಲಾಟೆಯಾಗಿ ಇಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ವರದಕ್ಷಿಣೆ ಕಿರುಕುಳದ ಪ್ರಕರಣ ಸಹ ದಾಖಲಾಗಿತ್ತು. ಇದೇ ಗಲಾಟೆ ಇದೀಗ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಸಂಬಂಧ ಊರಿಗಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.