Site icon newsroomkannada.com

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಸರ್ಕಾರದಿಂದ ಆದೇಶ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ (Private School) ಇನ್ನು ಮುಂದೆ ನಾಡಗೀತೆ (Nada Geethe) ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ
ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು (Govt Schools) ಮತ್ತು ಅನುದಾನಿತ ಶಾಲೆಗಳಲ್ಲಿ (Aided school) ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

Exit mobile version