main logo

ಏಷ್ಯನ್‌ ಗೇಮ್ಸ್‌ ನಲ್ಲಿ ಭಾರತದ ಕೀರ್ತಿ ಮುಗಿಲೆತ್ತರಕ್ಕೆ: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಏಷ್ಯನ್‌ ಗೇಮ್ಸ್‌ ನಲ್ಲಿ ಭಾರತದ ಕೀರ್ತಿ ಮುಗಿಲೆತ್ತರಕ್ಕೆ: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್​ಝೌ: ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ.

ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು.

ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!