Site icon newsroomkannada.com

ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ

ಮಂಗಳೂರು: ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಶನಿವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಡಿಸಿ ರವಿಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಸ್ಮಾರ್ಟ್ ಗವರ್ನೆನ್ಸ್ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಮುಲೈ ಮುಹಿಲನ್ ಅವರು ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1986ರಲ್ಲಿ ಜನಿಸಿದ ಅವರು 2013ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ ಅವರನ್ನೂ ಕೂಡಾ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ

Exit mobile version