main logo

ನರ್ಸ್ ಆಗಿದ್ದವಳು ‘ಡ್ರಗ್ ಪೆಡ್ಲರ್’ ಆದ್ಲು–ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದ ‘ರೆಜಿನಾ’!

ನರ್ಸ್ ಆಗಿದ್ದವಳು ‘ಡ್ರಗ್ ಪೆಡ್ಲರ್’ ಆದ್ಲು–ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದ ‘ರೆಜಿನಾ’!

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಇತ್ತೀಚೆಗೆ ಪತ್ತೆ ಹಚ್ಚಿದ್ದ ಮಾದಕ ವಸ್ತು MDMA ( Synthetic Drug)  ಮಾರಾಟ /ಸಾಗಾಟ ಜಾಲದಲ್ಲಿನ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರು ಇತ್ತೀಚೆಗಿನ ದಿನಗಳಲ್ಲಿ ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಪ್ರಮುಖ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದರು.

ಈ ಡ್ರಗ್ ದಂಧೆಯ ಕಿಂಗ್ ಪಿನ್ ನನ್ನು ಪತ್ತೆ ಹಚ್ಚುವ ಸಲುವಾಗಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿದ ಸಮಯ ಈ ಮಾದಕ ವಸ್ತುಗಳನ್ನು ಆರೋಪಿಗಳಿಗೆ ನೈಜಿರಿಯಾ ಮೂಲದ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಮಹಿಳೆಯೋರ್ವಳು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.

ಹೀಗೆ ನಡೆಸಿದ ದಾಳಿ ಸಂದರ್ಭದಲ್ಲಿ,  MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಅಡೆವೊಲೆ ಅಡೆಟುಟು ಆನು ಯಾನೆ ರೆಜಿನಾ ಜರಾ ಯಾನೆ ಆಯಿಶಾ (33) ಎಂಬಾಕೆಯನ್ನು ಬೆಂಗಳೂರಿನಿಂದ ವಶಕ್ಕೆ ಪಡೆದುಕೊಂಡು ಆಕೆಯ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಐಫೋನ್, ರೂ. 2910 ನಗದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910/- ಎಂದು ಅಂದಾಜಿಸಲಾಗಿದೆ.

ಈಕೆ ನೈಜೇರಿಯಾ ದೇಶದ ಪ್ರಜೆಯಾಗಿದ್ದು, ವ್ಯಾಸಂಗ ವೀಸಾದಡಿಯಲ್ಲಿ ಭಾರತಕ್ಕೆ ಬಂದು ವಿದ್ಯಾಭ್ಯಾಸ ಮಾಡಿಕೊಂಡು ನಂತರ ಇಲ್ಲಿ ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದಳು. ಬಳಿಕ ನರ್ಸಿಂಗ್ ಕೆಲಸವನ್ನು ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆಯನ್ನು ಪ್ರಾರಂಭಿಸಿದ್ದಳು.

ಈಕೆಯ ವಿರುದ್ಧ ಪ್ರಸ್ತುತ ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಈ ಏಳು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತುವನ್ನು ಖರೀದಿಸಿರುವುದು ತನಿಖೆಯಿಂದ ಬಯಲಾಗಿದೆ.

ಆರೋಪಿಯನ್ನುಇದೀಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ನರೇಂದ್ರ  ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!
ನ್ಯೂಸ್‌ರೂಮ್‌ ವಾಟ್ಸ್ಅಪ್ ಗ್ರೂಪ್ ಗೆ ಸೇರಿ