ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ‘ಕಡಲತಡಿಯ ಭಾರ್ಗವ’ ಡಾ. ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವದ ಪ್ರಯುಕ್ತ ಅ.10, ಮಂಗಳವಾರದಂದು ಇಲ್ಲಿನ ಪರ್ಲಡ್ಕದಲ್ಲಿರುವ ಬಯಲು ರಂಗ ಮಂದಿರದಲ್ಲಿ ಡಾ| ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ -2023 ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ, ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಗೆ ಪೂರ್ವಭಾವಿಯಾಗಿ ಬೆಳಿಗ್ಗೆ 9.30ರಿಂದ 10.30ರವರೆಗೆ, ವಿದ್ವಾನ್ ದೀಪಕ್ ಕುಮಾರ್, ಪುತ್ತೂರು ಇವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ, ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಇದರ ಪ್ರಬುದ್ಧ ಕಲಾವಿದರಿಂದ ಕನ್ನಡದ ಆಯ್ದ ಕವಿಗಳ ರಚನೆಯನ್ನು ನೃತ್ಯದ ರೂಪದಲ್ಲಿ ಪ್ರಸ್ತುತಪಡಿಸಲಿದ್ದಾರೆ.
ಕನ್ನಡದ ಶ್ರೇಷ್ಠ ಕವಿಗಳ ಗೀತ ಸ್ಮರಣೆಯ ಈ ಕಾರ್ಯಕ್ರಮದಲ್ಲಿ ವಿದ್ವಾನ್ ದೀಪಕ್ ಕುಮಾರ್ ದಂಪತಿ ಸೇರಿದಂತೆ 2 ತಂಡಗಳಲ್ಲಿ 15 ಕಲಾವಿದರು ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ.
ಕಾರ್ಯಕ್ರಮಗಳ ವಿವರ ಇಂತಿದೆ: