Site icon newsroomkannada.com

ಹೈಫಾ ಫಿಲಂ ಫೆಸ್ಟಿವಲ್‌ ಗೆ ತೆರಳಿದ್ದ ಡ್ರೀಮ್‌ ಗರ್ಲ್‌ ನಟಿ ನಾಪತ್ತೆ: ಫೋನ್‌ ಸಂಪರ್ಕಕಕ್ಕೂ ಸಿಗದೆ ಆತಂಕ

ನವದೆಹಲಿ: ಇಸ್ರೇಲ್‌ ಮೇಲೆ ಪ್ಯಾಲಿಸ್ತೇನಿ ಉಗ್ರಗಾಮಿ ಗುಂಪಾದ ಹಮಾಸ್‌ ತೀವ್ರ ದಾಳಿ ನಡೆಸಿದ್ದು ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಈ ನಡುವೆ ಬಾಲಿವುಡ್ ನಟಿ ನುಶ್ರತ್ ಭರುಚಾ ಅವರು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು. ಶನಿವಾರ ಮಧ್ಯಾಹ್ನ 12.30ಕ್ಕೆ ನಾವು ಅವರ ಜತೆ ಮಾತನಾಡಿದ್ದೆವು. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ” ಎಂದು ನಟಿಯ ತಂಡದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. ನುಸ್ರತ್‌ ಭರುಚ್ಚಾ ಅವರು ಡ್ರೀಮ್‌ ಗರ್ಲ್‌, ಅಕೇಲಿ, ಸೆಲ್ಫಿ, ಜನ್‌ ಹಿತ್‌ ಮೇ ಜಾರಿ ಸೇರಿ ಹಲವು ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ

Exit mobile version