Site icon newsroomkannada.com

ಒಡಿಶಾ ಭೀಕರ ರೈಲು ದುರಂತ ಪ್ರಕರಣ: ಮೂವರನ್ನು ಬಂಧಿಸಿದ ಸಿಬಿಐ

ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ 292 ಜನರು ಸಾವನ್ನಪ್ಪಿ 800 ಕ್ಕೂ ಹೆಚ್ಚು ಜನರು ಗಾಯಗೊಂಡ ತ್ರಿವಳಿ ರೈಲು ಅಪಘಾತದ ತನಿಖೆಯನ್ನು ವಹಿಸಿಕೊಂಡ ಕೆಲವೇ ದಿನಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ರೈಲ್ವೇ ಇಂಜಿನಿಯರ್ ಸೇರಿದಂತೆ ಮೂವರನ್ನು ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಸೋರ್‌ನಲ್ಲಿ ಹಿರಿಯ ಸೆಕ್ಷನ್ ಇಂಜಿನಿಯರ್ ಆಗಿದ್ದ ಅರುಣ್ ಕುಮಾರ್ ಮಹಂತ, ಸೊರೊದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿದ್ದ ಮೊಹಮ್ಮದ್ ಅಮೀರ್ ಖಾನ್ ಮತ್ತು ಬಾಲಸೋರ್‌ನಲ್ಲಿ ನಿಯೋಜಿಸಲಾಗಿದ್ದ ತಂತ್ರಜ್ಞ ಪಪ್ಪು ಕುಮಾರ್ ಅವರನ್ನು ಸಿಬಿಐ ಬಂಧಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಮತ್ತು 201 (ಸಾಕ್ಷ್ಯ ನಾಶ ) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಾನವ ಲೋಪವೇ ಈ ಭೀಕರ ದುರಂತಕ್ಕೆ ಕಾರಣ ಎಂದು ಸಿಬಿಐನ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Exit mobile version