ಕಾಪು: ನಾಗಬನ ಮತ್ತು ಮನೆ ಮೇಲೆ ಅಪಾಯಕಾರಿಯಾಗಿವಾಲಿದ್ದ ಮರವನ್ನು ಕಡಿಯುತ್ತಿದ್ದ ವೇಳೆ ಮರ ಉರುಳಿ ಬಿದ್ದು ಜಾರ್ಖಂಡ್ ಮೂಲದ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ಆ.2ರ ಸೋಮವಾರ ಮಧ್ಯಾಹ್ನ ನಡೆದಿದೆ.
ಬಿಹಾರ – ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕೂಲಿ ಕಾರ್ಮಿಕನಾಗಿದ್ದು, ಗಾಯಾಳುಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ಖಾಸಗಿಯವರಿಗೆ ಸೇರಿದ ನಾಗಬನವೊಂದರ ಮೇಲೆ ವಾಲಿದ್ದ ಬೃಹತ್ ಗೋಳಿಮರವನ್ನು ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೃಹತ್ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಅದು ಕಾರ್ಮಿಕರ ಮೇಲೆ ಉರುಳಿ ಬಿದ್ದಿತ್ತು. ಇದರಿಂದಾಗಿ ಮೂವರು ಕಾರ್ಮಿಕರು ಮರದಡಿಗೆ ಸಿಲುಕಿಕೊಂಡಿದ್ದು, ಓರ್ವ ಮರದಡಿ ಸಿಲುಕಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಬ್ಬರನ್ನು ರಕ್ಷಿಸಿ, ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.