main logo

ಪಣಂಬೂರು ವಿಹಾರಕ್ಕೆ ಬಂದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆ

ಪಣಂಬೂರು ವಿಹಾರಕ್ಕೆ ಬಂದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆ

ಪಣಂಬೂರು: ಇಲ್ಲಿನ ಕಡಲ ತೀರಕ್ಕೆ ವಿಹಾರಕ್ಕೆಂದು ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಕೈಕಂಬ ಕಾಲೇಜಿನಲ್ಲಿ ಪ್ರಥಮ ಪಿಯು ವಿದ್ಯಾರ್ಥಿ ಲಿಖಿತ್ (18), ಬೈಕಂಪಾಡಿ ಕಂಪೆನಿಯೊಂದರ ಮೇಲ್ವಿಚಾರಕ ನಾಗರಾಜ್ (24) ಹಾಗೂ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಿಲನ್ (20) ನಾಪತ್ತೆಯಾದವರು ಎಂದು ತಿಳಿದು ಬಂದಿದೆ. ಅವರು ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಸಮುದ್ರದ ಅಲೆಗಳ ಜೊತೆ ಆಟವಾಡುತ್ತಿದ್ದರು. ಈ ವೇಳೆ ಬೃಹತ್ ಅಲೆಯ ರಭಸಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ನೀರುಪಾಲು

Related Articles

Leave a Reply

Your email address will not be published. Required fields are marked *

error: Content is protected !!