ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಮಗನ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವುದಲ್ಲದೇ ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ನಡೆದಿದೆ.
ಶಾಲೆಯ ಮುಖ್ಯ ಶಿಕ್ಷಕಿ ಸುಮಲತಾ(ಹೆಸರು ಬದಲಾಯಿಸಲಾಗಿದೆ) ಎಂಬಾಕೆ ಈ ರೀತಿ ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾಳೆ. ಈ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿರುವ ಶಿಕ್ಷಕಿ, ವಿದ್ಯಾರ್ಥಿ ಕೂಡ ಶಿಕ್ಷಕಿಯರನ್ನು ಮುದ್ದಾಡಿದ್ದು, ಶಿಕ್ಷಕಿ ಕೂಡ ಬಾಲಕನಿಗೆ ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ.
ಶಿಕ್ಷಕಿಯ ವರ್ತನೆ ಬಗ್ಗೆ ಪೋಷಕರು ಕಿಡಿಕಾರಿದ್ದಾರೆ. ಅಲ್ಲದೇ ಬುಧವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಪೋಷಕರು ಕೂಡ ಶಾಲೆ ಬಳಿ ತೆರಳಿ ಶಿಕ್ಷಕಿ ವಿರುದ್ದ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆಯ ಬಗ್ಗೆ ಶಾಲೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದಾರೆ.