ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ಇಂದು ಬೆಳಂಬೆಳಿಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ. ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಚಿನ್ನಾಭರಣಗಳು, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ದೋಚಿದ್ದಾರೆ.