main logo

ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಮನೆಯೊಂದಕ್ಕೆ ಪೊಲೀಸ್ ರೈಡ್

ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಮನೆಯೊಂದಕ್ಕೆ ಪೊಲೀಸ್ ರೈಡ್

 

ಕಡಬ: ಅಕ್ರಮವಾಗಿ ಮೂರು‌ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಖಚಿತ ಮಾಹಿತಿ‌ ಮೇರೆಗೆ ಪೊಲೀಸರು ಮನೆಯೊಂದಕ್ಕೆ ದಾಳಿ ಮಾಡಿದ ಘಟನೆ ಮಾ.28 ರಂದು ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಕೆಮ್ಮಾರದಿಂದ ವರದಿಯಾಗಿದೆ.

ಖಚಿತ ಮಾಹಿತಿ ಮೇರೆಗೆ ಎಸ್.ಐ ಅಭಿನಂದನ್ ನೇತೃತ್ವದ ಪೊಲೀಸರು ಕೊಯಿಲ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಸ್ಥಳಕ್ಕೆ ದಾಳಿ‌ ಮಾಡಿರುವುದಾಗಿದೆ.ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.

 

ಆರೋಪಿತರಾದ ಕೊಯಿಲಾ ಗ್ರಾಮದ ಇಲ್ಯಾಸ್ ಮತ್ತು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಮಹಮ್ಮದ್‌ ಆಮು ಎಂಬವರು ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ 3 ದನಗಳನ್ನು ವಧೆ ಮಾಡುತ್ತಿರುವುದಾಗಿರುದು ಈ ವೇಳೆ ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

error: Content is protected !!