Site icon newsroomkannada.com

ಸಚಿವೆ ಶೋಭಾ ಕಾರ್ಯವೈಖರಿ ಕುರಿತು ಪ್ರಮೋದ್‌ ಮಧ್ವರಾಜ್‌ ಹೇಳಿದ್ದೇನು?

ಚಿಕ್ಕಮಗಳೂರು: ಉಡುಪಿ ಚಿಕ್ಕಮಗಳೂರು ಸಂಸದೆ, ಸಚಿವೆ ಶೋಭಾ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ ಎಂಬ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಪ್ರವಾಸೋದ್ಯಮ ಸೇರಿದಂತೆ ಜರಿಗೆ ಉದ್ಯೋಗ ಒದಗಿಸುವ ಕ್ಷೇತ್ರಗಳ ಅಭಿವೃದ್ಧಿಗೆ ನನ್ನ ಆದ್ಯತೆ. ಒತ್ತುವರಿ, ಕಸ್ತೂರಿ ರಂಗನ್‌ ವರದಿ ಜಾರಿ, ಹುಲಿ ಯೋಜನೆ, ಬಫರ್‌ ಝೋನ್‌, ಅಡಿಕೆ ಎಲೆಚುಕ್ಕಿ ರೋಗ ಮುಂತಾದವುಗಳನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಈ ನಿಟ್ಟಿನಲ್ಲಿ ತಾನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದರು.
ಕೆಲವು ಸಮಯದಿಂದ ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಟಿಕೆಟ್‌ ನೀಡಲಿ, ಬಿಡಲಿ ಪಕ್ಷದ ಪರ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ ಸರಕಾರದಲ್ಲಿ ಕ್ಯಾಬಿನೆಟ್‌ ಸಚಿವನಾಗಿ ಕೆಲಸ ಮಾಡಿದ್ದೇನೆ. ಮೋದಿ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚುನಾವಣೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದೇನೆ ಎಂದರು.

Exit mobile version