ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎನ್ನುವಾತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕಾರಿದ್ದರು. ಆದ್ರೆ, ಪ್ರತಿಮಾ ಅವರು ಕಿರಣ್ನನ್ನು ಕೆಲಸದಿಂದ ತೆಗೆದುಹಾಕಿದ್ದರು. ಹೀಗಾಗಿ ಕಿರಣನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗಮನಿಸಬೇಕಾದ ಅಂಶ ಅಂದರೆ ಕೃತ್ಯ ನಡೆದ ಬಳಿಕ ಕಿರಣ್ ಚಾಮರಾಜನಗರ ಕಡೆಗೆ ಎಸ್ಕೇಪ್ ಆಗಿದ್ದ ಎಂದು ತಿಳಿದುಬಂದಿದೆ.
ಕಿರಣ್ ಮೇಲೆ ಪೊಲೀಸರು ಹೆಚ್ಚು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಈತನ್ನು ಬಂಧಿಸುವ ಸಾಧ್ಯತೆಗಳಿವೆ. ಒಂದು ವೇಳೆ ಅರೆಸ್ಟ್ ಮಾಡಿದರೆ ಮೊದಲು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆ ಮಾಡಬೇಕಿದೆ ಎಂದು ಕಸ್ಟಡಿಗೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.