ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ NIA ಅಧಿಕಾರಿಗಳ ದಾಳಿ ಮತ್ತೆ ಮುಂದುವರಿದಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ವಿವಿಧ ಕಡೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿದ್ದ ಕಾರ್ಯಕರ್ತರ ಮನೆ ಮೇಲೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು ಒಟ್ಟು 6 ಕಡೆ ಏಕಕಾಲಕ್ಕೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಎಲೆಕ್ಟ್ರಾನಿಕ್ ಡಿವೈಸ್ ಸೇರಿದಂತೆ ಮಹತ್ವದ ದಾಖಲೆ ವಶ ಪಡೆದ ಬಗ್ಗೆ ಮೂಲಗಳು ಮಾಹಿತಿ ನೀಡಿವೆ. ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದರು.