ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜುಲೈ 13ರಂದು ಬೆಳಗ್ಗೆ ತಮ್ಮ ಫ್ರಾನ್ಸ್ ಪ್ರವಾಸ ಆರಂಭಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್‌ಗೆ ತೆರಳಿದ್ದಾರೆ. ನಾಳೆ ಮೋದಿಯವರು ಫ್ರಾನ್ಸ್ ನ ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದರಲ್ಲಿ 269 ಸದಸ್ಯರನ್ನೊಳಗೊಂಡ ಭಾರತೀಯ ಸೇನೆಯ ಮೂರೂ ಸೇವೆಗಳ ತುಕಡಿ ಭಾಗವಹಿಸಲಿವೆ.
ಈ ಸಂದರ್ಭದಲ್ಲಿ ಫ್ರೆಂಚ್ ಜೆಟ್‌ಗಳೊಂದಿಗೆ ಭಾರತೀಯ ವಾಯುಪಡೆಯ ಮೂರು ರಫೇಲ್ ಯುದ್ಧ ವಿಮಾನಗಳು ಹಾರಾಟ ನಡೆಸಲಿವೆ. ಭಾರತ ಮತ್ತು ಫ್ರಾನ್ಸ್ ಮಧ್ಯೆ ರಕ್ಷಣೆ, ಬಾಹ್ಯಾಕಾಶ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯಲು ಪ್ರಧಾನಿ ಮೋದಿ ಅವರು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.