Site icon newsroomkannada.com

ಪ್ರೊ.ಎ.ಎಸ್. ರಾಮಕೃಷ್ಣ ಪ್ರಕರಣ: ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಸುಳ್ಯ: ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಡಾ.ರೇಣುಕಾ ಪ್ರಸಾದ್ ಸೇರಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.

ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೈಕೋರ್ಟ್ ನ್ಯಾಯಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಬಸವರಾಜು ಅವರನ್ನೊಳಗೊಂಡ ವಿಭಾಗೀಯ ಪೀಠದಿಂದ ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ.

ಕೆವಿಜಿ ಮೆಡಿಕಲ್ ಕಾಲೇಜು ಆಡಳಿತ ಅಧಿಕಾರಿಯಾಗಿದ್ದ ಪ್ರೊ.ಎ.ಎಸ್ ರಾಮಕೃಷ್ಣ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿದ್ದ ಹೈಕೋರ್ಟ್ ದೋಷಿಗಳೆಂದು ತೀರ್ಪು ನೀಡಿತ್ತು. ಇದೀಗ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.2011ರ ಏಪ್ರಿಲ್ 28 ರಂದು ಬೆಳಗ್ಗೆ ಅಂಬೆತಡ್ಕ ಬಳಿ ಶ್ರೀ ಕೃಷ್ಣ ಆಯುರ್ವೇದಿಕ್ ಥೆರಪಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿದ್ದರು.ಗಂಭೀರ ಗಾಯಗೊಂಡ ಅವರು ಕೊನೆಯುಸಿರೆಳೆದಿದ್ದರು.

Exit mobile version