main logo

ಆ.20ರಂದು ಕುಡ್ಲದಲ್ಲಿ ಸೌಜನ್ಯ ಸಾವಿಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ

ಆ.20ರಂದು ಕುಡ್ಲದಲ್ಲಿ ಸೌಜನ್ಯ ಸಾವಿಗೆ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಧರ್ಮಸ್ಥಳ ಗ್ರಾಮದ ಸೌಜನ್ಯಳ ಸಾವಿಗೆ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಆಗ್ರಹ ಸಭೆಗಳು ನಡೆಯುತ್ತಿದ್ದು, ಅದರಂತೆ ಆ.20ರ ಆದಿತ್ಯವಾರದಂದು ಮಂಗಳೂರಿನಲ್ಲೂ ಈ ಕುರಿತಾದ ಪ್ರತಿಭಟನಾ ಸಭೆ ನಡೆಯಲಿದೆ.

ಸೌಜನ್ಯ ಹೋರಾಟ ಸಮಿತಿ ಮಂಗಳೂರು ಇದರ ನೇತೃತ್ವದಲ್ಲಿ  ಆ.20 ರಂದು ಸಂಜೆ 3.30ಕ್ಕೆ ನಗರದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಇಲ್ಲಿನ ಬಯಲು ಮಂದಿರದವರೆಗೆ ಪಾದಯಾತ್ರೆ ನಡೆಯಲಿದ್ದು ಆ ಬಳಿಕ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಹೋರಾಟ ಸಮಿತಿಯ ಮಂಗಳೂರು ಸಂಚಾಲಕಿ ಪ್ರಸನ್ನ ರವಿ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ನಡೆದು ಹನ್ನೊಂದು ವರ್ಷಗಳಾದರೂ ಈ ಪ್ರಕರಣದ ನೈಜ ಆರೋಪಿಗಳನ್ನು ಕಂಡು ಹಿಡಿಯಲು ನಮ್ಮ ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಹಾಗಾಗಿ ಈ ಪ್ರಕರಣದ ನ್ಯಾಯಾಂಗ ಮರು ತನಿಖೆಯಾಗಿ ಸಂತ್ರಸ್ತೆಗೆ ಹಾಗೂ ಆಕೆಯ ಕುಟುಂಬಕ್ಕೆ ನ್ಯಾಯ ದೊರಕಿಸಲು ಒತ್ತಾಯಿಸಲು ಈ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಈ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭ ಹೋರಾಟ ಸಮಿತಿಯ ಸದಸ್ಯ ವಿಖ್ಯಾತ್ ಉಳ್ಳಾಲ್, ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!